ಕುಷ್ಟಗಿ (ಕೊಪ್ಪಳ): ತಾಲೂಕಿನ ಮುದೇನೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ 10 ಕಂಪ್ಯೂಟರ್ ಹಾಗೂ ಒಂದು ಪ್ರಿಂಟರ್ ಮಷಿನ್ ಕದ್ದೊಯ್ದಿರುವ ಘಟನೆ ನಡೆದಿದೆ.
ಮುದೇನೂರು ಗ್ರಾಮದ ಹೊರವಲಯದಲ್ಲಿ ಈ ರೀತಿ ಕಳವು ಆಗುತ್ತಿರುವುದು ಇದು ನಾಲ್ಕನೇ ಬಾರಿ. ಸೋಮವಾರ ರಾತ್ರಿ ಅಂದಾಜು 3.50 ಲಕ್ಷ ರೂ. ಮೌಲ್ಯದ ಕಂಪ್ಯೂಟರ್ ಹಾಗೂ 16 ಸಾವಿರ ರೂ. ವೆಚ್ಚದ ಪ್ರಿಂಟರ್ ಹೊತ್ತೊಯ್ದಿದ್ದಾರೆ.
ಇಬ್ಬರು ವ್ಯಕ್ತಿಗಳು ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಪಿಎಸ್ಐ ತಿಮ್ಮಣ್ಣ ನಾಯಕ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಖ್ಯ ಶಿಕ್ಷಕ ಬಸವಂತಗೌಡ ಮೇಟಿ ದೂರಿನ ಮೇರೆಗೆ ಪ್ರಕರಣ ಕುಷ್ಟಗಿ ಠಾಣೆಯಲ್ಲಿ ದಾಖಲಾಗಿದೆ.