ಕೊಪ್ಪಳ: ಜಿಲ್ಲೆಯಲ್ಲಿ ಇಂದು 107 ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2329ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.

ಗಂಗಾವತಿ 47, ಕೊಪ್ಪಳ ತಾಲೂಕಿ 36, ಕುಷ್ಟಗಿ 11 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 13 ಪ್ರಕರಣಗಳು ದೃಢಪಟ್ಟಿವೆ. ಇಂದು 7 ಜನ ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 48 ಜನರು ಮೃತಪಟ್ಟಿದ್ದಾರೆ.

ಇಂದು 48 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 1218 ಜನರು ಗುಣಮುಖರಾಗಿದ್ದಾರೆ. 702 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 33,004 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 30,843 ಜನರ ವರದಿ ಬಂದಿದೆ. ಇನ್ನೂ 1948 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.