ಕೊಪ್ಪಳ: ಜಿಲ್ಲೆಯಲ್ಲಿ ಇಂದು 129 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 11,486 ಕ್ಕೆ ಏರಿಕೆಯಾಗಿದೆ.
ತಾಲೂಕುವಾರು ಕೋವಿಡ್ ವಿವರ:
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಈ ದಿನ ಗಂಗಾವತಿ ತಾಲೂಕಿನಲ್ಲಿ- 45, ಕೊಪ್ಪಳ ತಾಲೂಕಿನಲ್ಲಿ 35, ಕುಷ್ಟಗಿ ತಾಲೂಕಿನಲ್ಲಿ 29 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 20 ಪ್ರಕರಣ ಸೇರಿದಂತೆ ಒಟ್ಟು 129 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಮೃತರ ಮಾಹಿತಿ :
ಈವರೆಗೆ ಸೋಂಕಿನಿಂದ ಒಟ್ಟು 233 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಗುಣಮುಖ:
ಇಂದು 141 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 9,045 ಜನರು ಗುಣಮುಖರಾಗಿದ್ದಾರೆ. 1,926 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ.
ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.