ಕೊಪ್ಪಳ: ಜಿಲ್ಲೆಯಲ್ಲಿ ಇಂದು 139 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 3819 ಕ್ಕೆ ಏರಿಕೆಯಾಗಿದೆ.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಇಂದು ಗಂಗಾವತಿ ತಾಲೂಕಿನಲ್ಲಿ- 88, ಕೊಪ್ಪಳ ತಾಲೂಕಿನಲ್ಲಿ 37, ಕುಷ್ಟಗಿ ತಾಲೂಕಿನಲ್ಲಿ 08 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 06 ಪ್ರಕರಣ ಸೇರಿ ಇಂದು ಒಟ್ಟು 139 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಮೂವರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 85 ಜನ ಸೋಂಕಿತರು ಮೃತಪಟ್ಟಿದ್ದಾರೆ ಎಂದರು.
ಇಂದು 137 ಜನರು ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಗೊಂಡಿದ್ದು, ಒಟ್ಟು 2542 ಜನರು ಗುಣಮುಖರಾಗಿದ್ದಾರೆ. 844 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 40,470 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 39,601 ಜನರ ವರದಿ ಬಂದಿದೆ. ಇನ್ನೂ 860 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.