ಕೊಪ್ಪಳ: ಜಿಲ್ಲೆಯಲ್ಲಿ ಇಂದು 155 ಕೊರೊನಾ ಪಾಸಿಟಿವ್ ಕೇಸ್ಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,757 ಕ್ಕೆ ಏರಿಕೆಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ 50, ಕೊಪ್ಪಳ ತಾಲೂಕಿನಲ್ಲಿ 84, ಕುಷ್ಟಗಿ ತಾಲೂಕಿನಲ್ಲಿ 18 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 03 ಪ್ರಕರಣ ಸೇರಿ ಇಂದು ಒಟ್ಟು 155 ಪಾಸಿಟಿವ್ ಕೇಸ್ ದೃಢಪಟ್ಟಿವೆ.
![ಕೊಪ್ಪಳ ಕೊರೊನಾ ವರದಿ](https://etvbharatimages.akamaized.net/etvbharat/prod-images/kn-kpl-05-04-positive-cases-photo-7202284_04082020192339_0408f_1596549219_157.jpg)
ಇಂದು ಮೂವರು ಸೋಂಕಿತ ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 34 ಜನರು ಸಾವನ್ನಪ್ಪಿದ್ದಾರೆ. ಇಂದು 61 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 942 ಜನರು ಗುಣಮುಖರಾಗಿದ್ದಾರೆ.
375 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 28,681 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 27,643 ಜನರ ವರದಿ ಬಂದಿದೆ. ಇನ್ನೂ 1,035 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದಾರೆ.