ಕೊಪ್ಪಳ: ಜಿಲ್ಲೆಯಲ್ಲಿಂದು 163 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 8,610ಕ್ಕೆ ಏರಿಕೆಯಾಗಿದೆ. ಈ ಕುರಿತು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದಾರೆ.
ಗಂಗಾವತಿ ತಾಲೂಕಿನಲ್ಲಿ-98, ಕೊಪ್ಪಳ ತಾಲೂಕಿನಲ್ಲಿ-26, ಕುಷ್ಟಗಿ- 24 ಹಾಗೂ ಯಲಬುರ್ಗಾ ತಾಲೂಕಿನಲ್ಲಿ-15 ಪ್ರಕರಣ ಸೇರಿ ಒಟ್ಟು 163 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇದಲ್ಲದೆ 6 ಜನ ಸೋಂಕಿತರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 201 ಜನ ಮೃತಪಟ್ಟಿದ್ದಾರೆ. ಇಂದು 145 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 6,639 ಜನರು ಗುಣಮುಖರಾದ್ದಂತಾಗಿದೆ.
1,481 ಮಂದಿ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಸೋಂಕಿತರಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವೆರಿದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.