ಕೊಪ್ಪಳ: ಜಿಲ್ಲೆಯಲ್ಲಿ ಇಂದು 166 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,611 ಕ್ಕೆ ಏರಿಕೆಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ 98, ಕೊಪ್ಪಳ ತಾಲೂಕಿನಲ್ಲಿ 61, ಕುಷ್ಟಗಿ ತಾಲೂಕಿನಲ್ಲಿ 07 ಪ್ರಕರಣ ಸೇರಿ ಇಂದು ಒಟ್ಟು 166 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 55 ಜನರು ಮೃತಪಟ್ಟಿದ್ದಾರೆ.
![Koppal](https://etvbharatimages.akamaized.net/etvbharat/prod-images/kn-kpl-06-10-positive-cases-photo-7202284_10082020192445_1008f_1597067685_398.jpg)
ಇಂದು 89 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 1,331 ಜನರು ಗುಣಮುಖರಾಗಿದ್ದಾರೆ. 842 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 34,579 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 32,299 ಜನರ ವರದಿ ಬಂದಿದೆ. ಇನ್ನೂ 2,277 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಾಹಿತಿ ನೀಡಿದ್ದಾರೆ.