ETV Bharat / state

ಕೊಪ್ಪಳದಲ್ಲಿ ಕೊರೊನಾಗೆ ನಾಲ್ವರು ಬಲಿ....170 ಸೋಂಕಿತರು ಪತ್ತೆ

author img

By

Published : Aug 16, 2020, 5:51 PM IST

ಮಹಾಮಾರಿ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ನಾಲ್ವರು ಬಲಿಯಾಗಿದ್ದಾರೆ ಮತ್ತು 170 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3680 ಹಾಗು ಮೃತರ ಸಂಖ್ಯೆ 82ಕ್ಕೆ ಏರಿಕೆಯಾಗಿದೆ.

Koppala corona case's
Koppala corona case's

ಕೊಪ್ಪಳ: ಜಿಲ್ಲೆಯಲ್ಲಿ ಇಂದು 170 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 3680ಕ್ಕೆ ಏರಿಕೆಯಾಗಿದೆ. ಮತ್ತು ನಾಲ್ವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ತಾಲೂಕುವಾರು ಸೋಂಕು ಪ್ರಕರಣ:

ಗಂಗಾವತಿ ತಾಲೂಕಿನಲ್ಲಿ 112, ಕೊಪ್ಪಳದಲ್ಲಿ 51, ಕುಷ್ಟಗಿಯಲ್ಲಿ 3 ಹಾಗು ಯಲಬುರ್ಗಾ ತಾಲೂಕಿನಲ್ಲಿ 4 ಪ್ರಕರಣ ಸೇರಿ ಇಂದು ಒಟ್ಟು 170 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.

ಮೃತ ಪ್ರಕರಣ:

ಇಂದು ನಾಲ್ವರು ಸೋಂಕಿತರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 82ಕ್ಕೆ ತಲುಪಿದೆ.

ಗುಣಮುಖ:

ಇಂದು 154 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 2405 ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣ:

793 ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಕೋವಿಡ್ ಪರೀಕ್ಷೆ:

ಜಿಲ್ಲೆಯಲ್ಲಿ ಈವರೆಗೆ ಒಟ್ಟು
39872 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 39087 ಜನರ ವರದಿ ಬಂದಿದೆ. ಇನ್ನೂ 777 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.