ETV Bharat / state

ಕೊಪ್ಪಳದಲ್ಲಿ 191 ಸೋಂಕಿತರು ಪತ್ತೆ: 204 ಮಂದಿ ಗುಣಮುಖ

ಕೊಪ್ಪಳ ಜಿಲ್ಲೆಯಲ್ಲಿ ಇಂದು ಒಂದೇ ದಿನ 191 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರ ಜೊತೆಗೆ 204 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Koppal
Koppal
author img

By

Published : Aug 15, 2020, 7:38 PM IST

ಕೊಪ್ಪಳ: ಜಿಲ್ಲೆಯಲ್ಲಿ ಇಂದು 191 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,489 ಕ್ಕೆ ಏರಿಕೆಯಾಗಿದೆ.

ಇಂದು ಪತ್ತೆಯಾದ ಕೊರೊನಾ ಕೇಸ್ ಗಳ ವಿವರ
ಇಂದು ಪತ್ತೆಯಾದ ಕೊರೊನಾ ಕೇಸ್ ಗಳ ವಿವರ

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ- 111, ಕೊಪ್ಪಳ -44, ಕುಷ್ಟಗಿ -13 ಹಾಗೂ ಯಲಬುರ್ಗಾ ತಾಲೂಕಿನಲ್ಲಿ- 23 ಪ್ರಕರಣ ಸೇರಿ ಇಂದು ಒಟ್ಟು 191 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 78 ಜನ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಇಂದು 204 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 2,251 ಜನರು ಗುಣಮುಖರಾಗಿದ್ದಾರೆ. 703 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 39,260 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 38,752 ಜನರ ವರದಿ ಬಂದಿದೆ. ಇನ್ನೂ 680 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.