ETV Bharat / state

ಕೊಪ್ಪಳದಲ್ಲಿಂದು 20 ಕೊರೊನಾ ಪ್ರಕರಣ: ಸೋಂಕಿತರ ಸಂಖ್ಯೆ 11,878 ಕ್ಕೆ ಏರಿಕೆ

ಕೊಪ್ಪಳ ಜಿಲ್ಲೆಯಾದ್ಯಂತ ಇಂದು 20 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಕೊರೊನಾ ಪಾಸಿಟಿವ್​ ಪ್ರಕರಣಗಳ ಸಂಖ್ಯೆ 11,878 ಕ್ಕೇ ಏರಿದೆ. ಇಂದು 110 ಜನರು ಗಣಮುಖರಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

File Photo
ಸಂಗ್ರಹ ಚಿತ್ರ
author img

By

Published : Oct 3, 2020, 7:25 PM IST

ಕೊಪ್ಪಳ: ಜಿಲ್ಲೆಯಲ್ಲಿಂದು 20 ನೂತನ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವುದರ ಮೂಲಕ ಸೋಂಕಿತರ ಸಂಖ್ಯೆ 11,878 ಕ್ಕೆ ಏರಿಕೆಯಾದಂತಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ 05, ಕೊಪ್ಪಳ 06, ಕುಷ್ಟಗಿ 04 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 05 ಪ್ರಕರಣ ಸೇರಿ 20 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 241 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಇಂದು 110 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವುದರ ಮೂಲಕ ಈವರೆಗೆ ಒಟ್ಟು 9,972 ಜನರು ಗುಣಮುಖರಾದಂತಾಗಿದೆ. 1508 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದ್ದು, ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.