ಕೊಪ್ಪಳ: ಜಿಲ್ಲೆಯಲ್ಲಿಂದು 220 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 5,777ಕ್ಕೆ ಏರಿಕೆಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ 121, ಕೊಪ್ಪಳ ತಾಲೂಕಿನಲ್ಲಿ 41, ಕುಷ್ಟಗಿ ತಾಲೂಕಿನಲ್ಲಿ 34 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 24 ಪ್ರಕರಣ ಸೇರಿ ಒಟ್ಟು 220 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದರು.
ಇಂದು 3 ಜನ ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 132 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 229 ಜನರು ಸೇರಿದಂತೆ ಒಟ್ಟು 4,200 ಜನರು ಗುಣಮುಖರಾಗಿದ್ದಾರೆ ಎಂದು ತಿಳಿಸಿದರು.
1,194 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಾಹಿತಿ ನೀಡಿದ್ದಾರೆ.