ಕೊಪ್ಪಳ: ಜಿಲ್ಲೆಯಲ್ಲಿ ಮಂಗಳವಾರ 224 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 7 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಕೊಪ್ಪಳ ತಾಲೂಕಿನಲ್ಲಿ-45, ಗಂಗಾವತಿ-112, ಕುಷ್ಟಗಿ-28 ಹಾಗೂ ಯಲಬುರ್ಗಾ ತಾಲೂಕಿನ 39 ಪ್ರಕರಣ ಸೇರಿ ಒಟ್ಟು 224 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 22,991 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 379 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ನಿನ್ನೆ 238 ಜನರು ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 17,263 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 5,349 ಸಕ್ರಿಯ ಪ್ರಕರಣಗಳಿದ್ದು, 4,810 ಜನ ಸೋಂಕಿತರು ಹೋಂ ಐಸೋಲೇಷನ್ನಲ್ಲಿದ್ದಾರೆ. ಉಳಿದಂತೆ 539 ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.