ಕೊಪ್ಪಳ: ಜಿಲ್ಲೆಯಲ್ಲಿ ಇಂದು 308 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 10,434 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದರು.
ಕೋವಿಡ್ ಪ್ರಕರಣ ಮಾಹಿತಿ :
ಗಂಗಾವತಿ ತಾಲೂಕಿನಲ್ಲಿ- 104, ಕೊಪ್ಪಳ - 108, ಕುಷ್ಟಗಿ - 50 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 46 ಪ್ರಕರಣ ಸೇರಿ ಇಂದು ಒಟ್ಟು 308 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಮೃತರ ವಿವರ :
ಇಂದು ಓರ್ವ ಸೋಂಕಿತ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 223 ಜನ ಮೃತಪಟ್ಟಿದ್ದಾರೆ.
ಗುಣಮುಖ :
ಇವತ್ತು 189 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 8,089 ಜನರು ಗುಣಮುಖರಾಗಿದ್ದಾರೆ. 1,755 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ.
ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.