ETV Bharat / state

ವಿದ್ಯುತ್​​​ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳ ಸಾವು: ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ - ಪರಿಹಾರ ಘೋಷಿಸಿದ ಮುಖ್ಯಮಂತ್ರಿ

ವಿದ್ಯುತ್​ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಸದ ಸಂಗಣ್ಣ ಕರಡಿ, ಗವಿಮಠದ ಶ್ರೀಗವಿಸಿದ್ಧೇಶ್ವರ ಸ್ವಾಮೀಜಿ ಭೇಟಿ ನೀಡಿ ವಿಷಾದ ವ್ಯಕ್ತಪಡಿಸಿದ್ದಾರೆ.

5 children die: MP, District Collector Arrived at the place
author img

By

Published : Aug 18, 2019, 12:07 PM IST

ಕೊಪ್ಪಳ: ನಗರದ ಬನ್ನಿಕಟ್ಟೆಯ ಡಿ.ದೇವರಾಜು ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ವಿದ್ಯುತ್​ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಸಂಸದ ಸಂಗಣ್ಣ ಕರಡಿ, ಗವಿಮಠದ ಶ್ರೀಗವಿಸಿದ್ಧೇಶ್ವರ ಸ್ವಾಮೀಜಿ ಭೇಟಿ ನೀಡಿ ವಿಷಾದ ವ್ಯಕ್ತಪಡಿಸಿದ್ದಾರೆ.

₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಕೊಪ್ಪಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಮಕ್ಕಳು ಮೃತಪಟ್ಟ ವಿಷಯ ತಿಳಿದು, ಸ್ಥಳಕ್ಕೆ ಧಾವಿಸಿದ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಎದೆ ಬಡಿದುಕೊಂಡು ರೋದಿಸುತ್ತಿದ್ದಾರೆ.

ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್

ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಸ್ಥಳಕ್ಕಾಗಮಿಸಿ ವಸತಿ ನಿಲಯದ ಸಿಬ್ಬಂದಿ ಹಾಗೂ ಪೊಲೀಸರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಬಿಸಿಎಂ ಅಧಿಕಾರಿ ಈರಣ್ಣ ಆಶಾಪುರಿ, ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆಗಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅವಘಡ: ವಿದ್ಯುತ್​​​​ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳ ದುರ್ಮರಣ

ಮಕ್ಕಳ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಯಿಂದ ಹೆದರಿದ ವಸತಿ ನಿಲಯದ ಮಕ್ಕಳಿಗೆ ಅಧಿಕಾರಿಗಳು ಧೈರ್ಯ ತುಂಬುತ್ತಿದ್ದಾರೆ.

Intro:

Body:ಕೊಪ್ಪಳ:- ನಗರದ ಬನ್ನಿಕಟ್ಟೆ ಪ್ರದೇಶದ ಬಳಿ ಇರುವ ಬಿಸಿಎಂ ಇಲಾಖೆಯ ಮೆಟ್ರಿಕ್‌ ಪೂರ್ವ ಹಾಸ್ಟೆಲ್‌ನಲ್ಲಿ ಐವರು ವಿದ್ಯಾರ್ಥಿಗಳಿಗೆ ವಿದ್ಯುತ್ ಸ್ಪರ್ಶಿಸಿ ದಾರುಣ ಸಾವು ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಸಂಸದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ, ಎಸ್ಪಿ ಅನೇಕ ಭೇಟಿ ನೀಡಿ ಘಟನೆಗರ ವಿಷಾದ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್, ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಸೇರಿದಂತೆ ಅನೇಕರು ಘಟನಾ ಸ್ಥಳಕ್ಕೆ ದೌಡಾಯಿಸಿ ವಿಷಾದ ವ್ಯಕ್ತಪಡಿಸಿದರು. ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಹಾಗೂ ಬಿಸಿಎಂ ಅಧಿಕಾರಿ ಈರಣ್ಣ ಆಶಾಪುರಿ ಘಟನೆ ಬಗ್ಗೆ ಖೇದ ವ್ಯಕ್ತಪಡಿಸಿದರು‌. ಅಲ್ಲದೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಬೈಟ್1:- ಪಿ. ಸುನೀಲಕುಮಾರ್, ಜಿಲ್ಲಾಧಿಕಾರಿ (ನೀಲಿ ಬಣ್ಣದ ಜಾಕೆಟ್ ಹಾಕಿರುವವರು)
ಬೈಟ್2:- ಈರಣ್ಣ ಆಶಾಪುರಿ, ಬಿಸಿಎಂ ಅಧಿಕಾರಿ. (ಚೆಕ್ಸ್ ಟಿಶರ್ಟ್ ಹಾಕಿರುವವರು)

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.