ETV Bharat / state

ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ: ಸ್ಕಾರ್ಪಿಯೋದಲ್ಲಿದ್ದ ಐವರು ಸ್ಥಳದಲ್ಲೇ ಸಾವು - ಕೊಪ್ಪಳದ ಯಲಬುರ್ಗಾ ತಾಲೂಕಿನ ಭಾನಾಪುರ ಬಳಿ ಅಪಘಾತ

ಅಪರಿಚಿತ ವಾಹನವೊಂದು ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ ಘಟನೆ ಕೊಪ್ಪಳದ ಯಲಬುರ್ಗಾ ತಾಲೂಕಿನಲ್ಲಿ ಸಂಭವಿಸಿದೆ.

5-killed-in-road-accident-near-yalaburga
ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ: ಸ್ಕಾರ್ಪಿಯೋದಲ್ಲಿದ್ದ ಐವರು ಸ್ಥಳದಲ್ಲೇ ಸಾವು
author img

By

Published : Jul 24, 2022, 6:30 AM IST

Updated : Jul 24, 2022, 6:59 AM IST

ಕೊಪ್ಪಳ: ಯಲಬುರ್ಗಾ ತಾಲೂಕಿನ ಭಾನಾಪುರ ಬಳಿ ಶನಿವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತರ ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

5-killed-in-road-accident-near-yalaburga
ಸ್ಕಾರ್ಪಿಯೋ ವಾಹನ

ಅಪರಿಚಿತ ವಾಹನವೊಂದು ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದಿದೆ. ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ(62), ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32), ಸಂಬಂಧಿ ಕಸ್ತೂರಮ್ಮ(20) ಮೃತಪಟ್ಟವರು. ಕೊಪ್ಪಳದಲ್ಲಿ ನಡೆದ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮಕ್ಕೆ ವಾಪಸ್ ಬರುವಾಗ ಅವಘಡ ಸಂಭವಿಸಿದೆ.

ಚಾಲಕ ಹರ್ಷವರ್ಧನ, ಮಕ್ಕಳಾದ ಬಸವರಾಜ, ಪುಟ್ಟರಾಜ, ಭೂಮಿಕಾ ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ವಾಹನದಲ್ಲಿ ಒಟ್ಟು ಒಂಬತ್ತು ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು ಸಿಸಿಟಿವಿಯಲ್ಲಿ ಸೆರೆಯಾಯಿತು ಭಯಾನಕ ದೃಶ್ಯ..!

Last Updated : Jul 24, 2022, 6:59 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.