ETV Bharat / state

ಕೊಪ್ಪಳ: 55 ಕೊರೊನಾ ಪ್ರಕರಣಗಳು ಪತ್ತೆ, 108 ಮಂದಿ ಗುಣಮುಖ

ಜಿಲ್ಲೆಯಲ್ಲಿ ನಿನ್ನೆ 55 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ ಓರ್ವ ಸೋಂಕಿತ ಮೃತಪಟ್ಟಿದ್ದು, 108 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

Koppal
Koppal
author img

By

Published : Oct 22, 2020, 10:10 AM IST

ಕೊಪ್ಪಳ: ಜಿಲ್ಲೆಯಲ್ಲಿ ನಿನ್ನೆ 55 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 13,079ಕ್ಕೆ ಏರಿಕೆಯಾಗಿದೆ.

ಕೊರೊನಾ ಹೆಲ್ತ್ ಬುಲೆಟಿನ್
ಜಿಲ್ಲಾ ಕೊರೊನಾ ಹೆಲ್ತ್ ಬುಲೆಟಿನ್

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ- 21, ಕೊಪ್ಪಳ- 14, ಕುಷ್ಟಗಿ - 17 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 03 ಪ್ರಕರಣ ಸೇರಿ ನಿನ್ನೆ ಒಟ್ಟು 55 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ ಓರ್ವ ಸೋಂಕಿತ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ 273 ಜನ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ನಿನ್ನೆ 108 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 12,202 ಜನರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. 509 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.