ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಇಂದು 553 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 7 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಕೊಪ್ಪಳ 148, ಗಂಗಾವತಿ 198, ಕುಷ್ಟಗಿ 63 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 144 ಪ್ರಕರಣ ಸೇರಿ ಒಟ್ಟು 553 ಜನರಿಗೆ ಸೋಂಕು ತಗುಲಿದೆ. ಈವರೆಗೆ 24,445 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು 7 ಜನ ಸೋಂಕಿತರು ಸಾವನ್ನಪ್ಪಿದ್ದು, ಸೋಂಕಿತರ ಸಾವಿನ ಸಂಖ್ಯೆ 413ಕ್ಕೇರಿದೆ.

ಇಂದು 930 ಜನರು ಗುಣಮುಖರಾಗಿದ್ದು, ಈವರೆಗೆ ಒಟ್ಟು 19,411 ಜನರು ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ 4621 ಸಕ್ರಿಯ ಪ್ರಕರಣಗಳಿದ್ದು, 3947 ಜನ ಸೋಂಕಿತರು ಹೋಂ ಐಸೋಲೇಷನ್ ನಲ್ಲಿದ್ದಾರೆ. 674 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.