ಕೊಪ್ಪಳ:ಜಿಲ್ಲೆಯಲ್ಲಿ ಇಂದು 63 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 10641 ಕ್ಕೆ ಏರಿಕೆಯಾಗಿದೆ.
![new kovid cases from koppala](https://etvbharatimages.akamaized.net/etvbharat/prod-images/kn-kpl-04-21-positive-cases-photo-7202284_21092020193051_2109f_1600696851_463.jpg)
ಈ ಕುರಿತು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದು, ಗಂಗಾವತಿ ತಾಲೂಕಿನಲ್ಲಿ- 8, ಕೊಪ್ಪಳ ತಾಲೂಕಿನಲ್ಲಿ 18, ಕುಷ್ಟಗಿ ತಾಲೂಕಿನಲ್ಲಿ 25 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 12 ಪ್ರಕರಣ ಸೇರಿ ಇಂದು ಒಟ್ಟು 63 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದಿದ್ದಾರೆ. ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 227 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಇಂದು 147 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 8387 ಜನರು ಗುಣಮುಖರಾಗಿದ್ದಾರೆ. 1781 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಸೋಂಕಿತರಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.