ETV Bharat / state

ಕೊಪ್ಪಳ ಜಿಲ್ಲೆಯಲ್ಲಿ ಇಂದು 82 ಪಾಸಿಟಿವ್ ಪ್ರಕರಣಗಳು ಪತ್ತೆ... - ಕೊಪ್ಪಳ ಕೋವಿಡ್​ ಸುದ್ದಿ

ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಇಂದು ಮೂವರು ಸಾವನ್ನಪ್ಪಿದ್ದು, ಈವರೆಗೆ ಸೋಂಕಿನಿಂದ ಒಟ್ಟು 263 ಜನ ಮೃತಪಟ್ಟಿದ್ದಾರೆ.

koppal
ಕೊಪ್ಪಳ
author img

By

Published : Oct 10, 2020, 8:12 PM IST

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಇಂದು 82 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 12,461ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ 16, ಕೊಪ್ಪಳ ತಾಲೂಕಿನಲ್ಲಿ 31, ಕುಷ್ಟಗಿ ತಾಲೂಕಿನಲ್ಲಿ 08 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 27 ಪ್ರಕರಣ ಸೇರಿ ಇಂದು ಒಟ್ಟು 82 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

report
ವರದಿ

ಇಂದು ಮೂವರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 263 ಜನ ಮೃತಪಟ್ಟಿದ್ದಾರೆ. ಇಂದು 23 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 11,030 ಜನರು ಗುಣಮುಖರಾಗಿದ್ದಾರೆ.

1,020 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.