ETV Bharat / state

ಕೊಪ್ಪಳದ 84 ಮಂದಿಗೆ ಕೊರೊನಾ... ಸೋಂಕಿತರ ಸಂಖ್ಯೆ1278ಕ್ಕೆ ಏರಿಕೆ - Koppala latest news

84 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿ ಸೋಂಕಿತರ ಸಂಖ್ಯೆ 1278ಕ್ಕೆ ತಲುಪಿದೆ. ಈ ಪೈಕಿ 793 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Koppala corona case
Koppala corona case
author img

By

Published : Aug 1, 2020, 9:29 PM IST

ಕೊಪ್ಪಳ: ಜಿಲ್ಲೆಯಲ್ಲಿ ಇಂದು 84 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 1278 ಕ್ಕೇರಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ

ಗಂಗಾವತಿ ತಾಲೂಕಿನಲ್ಲಿ 36, ಕೊಪ್ಪಳ ತಾಲೂಕಿನಲ್ಲಿ 26, ಕುಷ್ಟಗಿ ತಾಲೂಕಿನಲ್ಲಿ 12 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 10 ಪ್ರಕರಣ ಸೇರಿ ಇಂದು ಒಟ್ಟು 84 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇಂದು 36 ಮಂದಿ ಸಂಪೂರ್ಣ ಗುಣಮುಖರಾಗಿದ್ದು, ಇಲ್ಲಿಯವರೆಗೆ ಒಟ್ಟು 793 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 211 ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಇಲ್ಲಿಯವರೆಗೆ 26 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 25773 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 24762 ಜನರ ವರದಿ ಬಂದಿದೆ. 1011 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.