ETV Bharat / state

ಕೊಪ್ಪಳದಲ್ಲಿ ಇಂದು 88 ಕೊರೊನಾ ಕೇಸ್ ಪತ್ತೆ

ಕೊಪ್ಪಳ ಜಿಲ್ಲೆಯಲ್ಲಿ ಇಂದು 88 ಕೊರೊನಾ ಪಾಸಿಟಿವ್ ಕೇಸ್​​ಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 967 ಕ್ಕೆ ಏರಿಕೆಯಾಗಿದೆ.

Corona case detected today in Koppal
ಕೊಪ್ಪಳದಲ್ಲಿ ಇಂದು 88 ಕೊರೊನಾ ಕೇಸ್ ಪತ್ತೆ
author img

By

Published : Jul 28, 2020, 10:39 PM IST

ಕೊಪ್ಪಳ: ಜಿಲ್ಲೆಯಲ್ಲಿ ಇಂದು 88 ಕೊರೊನಾ ಪಾಸಿಟಿವ್ ಕೇಸ್​​ಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 967 ಕ್ಕೆ ಏರಿಕೆಯಾಗಿದೆ. ಗಂಗಾವತಿ ತಾಲೂಕಿನಲ್ಲಿ- 59, ಕೊಪ್ಪಳ ತಾಲೂಕಿನಲ್ಲಿ 25, ಕುಷ್ಟಗಿ ತಾಲೂಕಿನಲ್ಲಿ 3 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 1 ಸೇರಿ ಇಂದು ಒಟ್ಟು 88 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಇಂದು ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 20 ಜನರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 594 ಜನರು ಗುಣಮುಖರಾಗಿದ್ದಾರೆ. 116 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನು ಉಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 22,471 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 22146 ಜನರ ವರದಿ ಬಂದಿದೆ. ಇನ್ನೂ 325 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.