ಕೊಪ್ಪಳ: ಜಿಲ್ಲೆಯಲ್ಲಿ ಇಂದು 98 ಪಾಸಿಟಿವ್ ಕೇಸ್ಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1194 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದರು.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಗಂಗಾವತಿ ತಾಲೂಕಿನಲ್ಲಿ 53, ಕೊಪ್ಪಳ ತಾಲೂಕಿನಲ್ಲಿ 27, ಕುಷ್ಟಗಿ ತಾಲೂಕಿನಲ್ಲಿ 17 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 1 ಪ್ರಕರಣ ಸೇರಿ ಇಂದು ಒಟ್ಟು 98 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 26 ಜನರು ಸಾವನ್ನಪ್ಪಿದ್ದಾರೆ ಎಂದರು.
ಇಂದು 68 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 757 ಜನರು ಗುಣಮುಖರಾಗಿದ್ದಾರೆ. 175 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 24,960 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ 24,002 ಜನರ ವರದಿ ಬಂದಿದೆ. ಇನ್ನೂ 958 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.