ಕೊಪ್ಪಳ : ಜಿಲ್ಲೆಯಲ್ಲಿ ಇಂದು 65 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 12,299 ಕ್ಕೆ ಏರಿಕೆಯಾಗಿದೆ.
ತಾಲೂಕುವಾರು ಕೋವಿಡ್ ವಿವರ :
ಗಂಗಾವತಿ ತಾಲೂಕಿನಲ್ಲಿ- 21, ಕೊಪ್ಪಳ ತಾಲೂಕಿನಲ್ಲಿ -23, ಕುಷ್ಟಗಿ ತಾಲೂಕಿನಲ್ಲಿ -15 ಹಾಗೂ ಯಲಬುರ್ಗಾ ತಾಲೂಕಿನಲ್ಲಿ- 06 ಪ್ರಕರಣಗಳು ಪತ್ತೆಯಾಗಿವೆ.
ಮೃತರಿಷ್ಟು :
ಇಂದು ಮೂವರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 258 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಗುಣಮುಖರಿಷ್ಟು :
ಜಿಲ್ಲೆಯಲ್ಲಿ ಈ ದಿನ 98 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 10,837 ಜನರು ಗುಣಮುಖರಾಗಿದ್ದಾರೆ. ಇನ್ನೂ1,133 ಜನರು ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ.
ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.