ಕೊಪ್ಪಳ: ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ನಿನ್ನೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಎಎಸ್ಐ ಡಿ ಕೆ ನಾಯಕ್ ತಿಳಿಸಿದ್ದಾರೆ.
ಕಳೆದ ಆರು ತಿಂಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯನ್ನ ಮರುಳುಮಾಡಿ ಅತ್ಯಾಚಾರ ಎಸಗಿದ್ದಾನೆ. ಜೊತೆಗೆ ಅತ್ಯಾಚಾರ ಮಾಡಿರುವುದನ್ನು ವಿಡಿಯೋ ಮಾಡಿಟ್ಟುಕೊಂಡಿದ್ದು, ಈ ಕುರಿತು ಯಾರಿಗಾದರೂ ತಿಳಿಸಿದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ. ಹೀಗಾಗಿ, ಬಾಲಕಿ ಈ ಕುರಿತು ಪೋಷಕರಿಗೆ ವಿಷಯ ತಿಳಿಸಿಲ್ಲ.
ಗುರುವಾರ ಅಪ್ರಾಪ್ತೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ. ಬಳಿಕ ಬಾಲಕಿಯ ಪಾಲಕರು ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಿಕೊಂಡ ಪೊಲೀಸರು ಶುಕ್ರವಾರ ಆರೋಪಿ ಮೈಲಪ್ಪ ಜ್ಯಾಳಾರ ಎಂಬಾತನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ ಎಸಗಿದ ವ್ಯಕ್ತಿಗೆ 25 ವರ್ಷಗಳ ಕಠಿಣ ಜೈಲು ಶಿಕ್ಷೆ