ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 10ಕ್ಕೆ ಏರಿದೆ.
ಜಿಲ್ಲೆಯ ಕಾರಟಗಿ ಪಟ್ಟಣದ 53 ವರ್ಷದ ಸೋಂಕಿತನೊಬ್ಬ ಸಾವನ್ನಪ್ಪಿದ್ದಾನೆ. ಜುಲೈ 12ರಂದು ಕೊಪ್ಪಳದ ಕೊವೀಡ್-19 ಆಸ್ಪತ್ರೆಗೆ ದಾಖಲಾಗಿದ್ದರು.
ಸಕ್ಕರೆ ಕಾಯಿಲೆ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸೋಂಕಿತ ವ್ಯಕ್ತಿ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ಮಾಹಿತಿ ನೀಡಿದ್ದಾರೆ.