ಕೊಪ್ಪಳ: ಧಾರಾಕಾರ ಮಳೆಗೆ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಈ ನಡುವೆ ರಸ್ತೆ ಮೇಲೆ ನೀರು ನಿಂತಿದ್ದರಿಂದ ರಸ್ತೆ ಕಾಣದೆ ಟ್ರ್ಯಾಕ್ಟರ್ ಹಳ್ಳಕ್ಕೆ ಉರುಳಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕೊಪ್ಪಳ ತಾಲೂಕಿನ ಹಂದ್ರಾಳ ಗ್ರಾಮದ ಬಳಿಯ ರಸ್ತೆಯಲ್ಲಿ ನೀರು ತುಂಬಿಕೊಂಡಿತ್ತು. ಜಮೀನಿನಲ್ಲಿ ಕೆಲಸ ಮುಗಿಸಿ ಟ್ರ್ಯಾಕ್ಟರ್ ಮೂಲಕ ವಾಪಸಾಗುತ್ತಿದ್ದಾಗ ಘಟನೆ ನಡೆದಿದೆ. ಮಳೆಯಿಂದಾಗಿ ರಸ್ತೆ ಬದಿಯ ಮಣ್ಣು ಕುಸಿದಿದ್ದರಿಂದ ಅವಘಡ ಸಂಭವಿಸಿದೆ.
ಪ್ರತಿ ವರ್ಷ ಮಳೆ ಬಂದಾಗಲೂ ಈ ರಸ್ತೆಯಲ್ಲಿ ಅವಘಡ ಸಂಭವಿಸುತ್ತಿರುತ್ತದೆ. ಮಳೆ ಬಂದರೆ ನೀರು ತುಂಬಿಕೊಳ್ಳವ ರಸ್ತೆಯಲ್ಲಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಲಾರಿ-ಬಸ್ ಮುಖಾಮುಖಿ ಡಿಕ್ಕಿ: 9ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ