ಕೊಪ್ಪಳ: ಬೈಕ್ ಸವಾರನಿಗೆ ಲಾರಿಯೊಂದು ಡಿಕ್ಕಿ ಹೊಡೆದು ಆತನ ಮೇಲೆಯೇ ಉರುಳಿ ಬಿದ್ದಿರುವ ಘಟನೆ ತಾಲೂಕಿನ ಶಹಪೂರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ತಂಬಾಕು ತುಂಬಿಕೊಂಡು ಬೆಂಗಳೂರಿನತ್ತ ಸಾಗುತ್ತಿದ್ದ ಲಾರಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಬಳಿಕ ಲಾರಿ ಆತನ ಮೇಲೆ ಪಲ್ಟಿಯಾಗಿದೆ. ಘಟನೆಯಲ್ಲಿ ಕೆರೆಹಳ್ಳಿ ಗ್ರಾಮದ ಬೈಕ್ ಸವಾರ ಮಲ್ಲಪ್ಪ ಬೆಟದಪ್ಪ ಡೊಳ್ಳಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಇನ್ನು ವ್ಯಕ್ತಿಯ ಮೇಲೆ ಟ್ರಕ್ ಉರುಳಿ ಬಿದ್ದಿರುವುದರಿಂದ ಕ್ರೇನ್ ಮೂಲಕ ವಾಹನವನ್ನು ತೆರುವುಗೊಳಿಸಿ ರಸ್ತೆ ಸಂಚಾರಕ್ಕೆ ಸ್ಥಳೀಯರು ಅನುವು ಮಾಡಿಕೊಟ್ಟರು. ಘಟನೆಯಲ್ಲಿ ಪಾನಮತ್ತನಾಗಿ ಲಾರಿ ಚಲಾಯಿಸುತ್ತಿದ್ದ ಚಾಲಕನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮುನಿರಾಬಾದ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.