ಗಂಗಾವತಿ: 16 ವರ್ಷದ ಬಾಲಕಿಯನ್ನು ಯುವಕನೊಬ್ಬ ಬೆಂಗಳೂರಿಗೆ ಕರೆದೊಯ್ದು ಮದುವೆಯಾದ ಘಟನೆ ಬೆಳಕಿಗೆ ಬಂದಿದ್ದು, ಬಾಲಕಿಯ ಪೋಷಕರು ಯುವಕನ ಮೇಲೆ ದೂರು ದಾಖಲಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಅಂಗಡಿ ಸಂಗಣ್ಣ ಕ್ಯಾಂಪಿನ ಶೇಖರ ಎಂಬ ಯುವಕ ಕಳೆದ ಹಲವು ತಿಂಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾನೆ. ಬಾಲಕಿಯ ತಾಯಿ ನೀಡಿದ ದೂರಿನ ಮೆರೆಗೆ ಯುವಕ ಮೇಲೆ ಪ್ರಕರಣ ದಾಖಲಾಗಿದೆ.
ನನ್ನ ಮಗಳನ್ನು ಪುಸಲಾಯಿಸಿ, ನಂಬಿಸಿ ಬೆಂಗಳೂರಿಗೆ ಕರೆದೊಯ್ದ ಈ ಯುವಕ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾನೆ. ಬಳಿಕ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಪಾಲಕರು ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬಾಲಕಿ ಪೋಷಕರು ನೀಡಿದ ದೂರಿನ ಮೆರೆಗೆ ಆರೋಪಿಯ ಮೇಲೆ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿ ವಿಚಾರಣೆ ಕೈಗೊಂಡಿದ್ದಾರೆ.