ಕೊಪ್ಪಳ: ಇಲ್ಲಿನ ನಗರಸಭೆ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಆಸ್ತಿ ವರ್ಗಾವಣೆ ಮಾಡಲು ಕಂದಾಯ ನಿರೀಕ್ಷಕ ರಾಘವೇಂದ್ರ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಎಸಿಬಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಆಸ್ತಿ ವರ್ಗಾವಣೆಗಾಗಿ ಅಮರೇಶ್ ಸುಂಕದ ಎಂಬುವರಿಂದ 15 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. ಎಸಿಬಿ ಡಿವೈಎಸ್ಪಿ ಆರ್.ಎಸ್. ಉಜ್ಜಿನಕೊಪ್ಪ ನೇತೃತ್ವದಲ್ಲಿ ಈ ದಾಳಿ ನಡೆದಿದೆ.