ಗಂಗಾವತಿ: ಮನೆದೇವರ ಜಾತ್ರೆಗೆ ಹೊರಟಿದ್ದವರ ಕ್ರೂಸರ್ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟು, 5ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ತಾಲೂಕಿನ ಜಂಗಮರ ಕಲ್ಗುಡಿ ಬಳಿ ಇಂದು ಬೆಳಗಿನಜಾವ ಸಂಭವಿಸಿದೆ.
ಬೆಂಗಳೂರಿನಿಂದ ಲಿಂಗಸುಗೂರಿನ ಹಟ್ಟಿಗೆ ಹೊರಟಿದ್ದ ಬಸ್, ಜವಳಗೆರಾದಿಂದ ಹರಿಹರಕ್ಕೆ ಹೊರಟಿದ್ದ ಕ್ರೂಸರ್ ನಡುವೆ ಅಪಘಾತವಾಗಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೆರಾದ 9 ವರ್ಷದ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಕ್ರೂಸರ್ನಲ್ಲಿದ್ದ 5ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರ ನೆರವಿನಿಂದ 112 ಗಸ್ತು ವಾಹನದ ಮೂಲಕ ಪೊಲೀಸರು ಗಂಗಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಇದನ್ನೂ ಓದಿ: ಕಾವೇರಿ ಕೂಗು ಯೋಜನೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್