ಕೊಪ್ಪಳ: ಅಕ್ರಮ ಕಲ್ಲು, ಮರಳು ಗಣಿಗಾರಿಕೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ತಿಳಿದ್ದಾರೆ.
ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಐದಾರು ಕಡೆ ಮರಳು ಗಣಿಗಾರಿಕೆ ಪಾಯಿಂಟ್ ಗುರುತಿಸಿ ಸಕ್ರಮಗೊಳಿಸಲಾಗಿದೆ. ಪರ್ಮಿಟ್ ಇರುವವರಿಂದ ಮಾತ್ರ ಸಾರ್ವಜನಿಕರು ಮರಳನ್ನು ಖರೀದಿಸಬೇಕು. ಪರ್ಮಿಟ್ ಇಲ್ಲದೆ ಅಕ್ರಮ ಗಣಿಗಾರಿಕೆ ಮೂಲಕ ತಂದ ಕಲ್ಲು, ಮರಳನ್ನು ಸಾರ್ವಜನಿಕರು ಖರೀದಿಸಬಾರದು. ಈ ಮೂಲಕ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಸಹಕಾರ ನೀಡಬೇಕು.
ಇದನ್ನೂ ಓದಿ: ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ದಾಳಿ: ಅಂತಾರಾಜ್ಯ ಡ್ರಗ್ ಪೆಡ್ಲರ್ಗಳ ಬಂಧನ
ಜಿಲ್ಲಾಡಳಿತ ಬಹಳ ಗಂಭೀರವಾಗಿ ಇದನ್ನು ಪರಿಗಣಿಸಿದ್ದು, ಯಾವುದೇ ರೀತಿಯ ಅಕ್ರಮ ಗಣಿಗಾರಿಕೆ ನಡೆಸುವವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಅಕ್ರಮ ಮರಳು ಗಣಿಗಾರಿಕೆ ಹಿನ್ನೆಲೆ, ಕಿನ್ನಾಳ ಗ್ರಾಮದಲ್ಲಿ ಇತ್ತೀಚೆಗೆ ದಾಳಿ ನಡೆಸಿ ಸುಮಾರು 50-60 ಟಿಪ್ಪರ್ ಮರಳು ವಶಪಡಿಸಿಕೊಂಡು ವಾಹನಗಳನ್ನು ಸಹ ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗಿದೆ. ಅನೇಕರಿಗೆ ದಂಡ ವಿಧಿಸಲಾಗಿದೆಯೆಂದು ತಿಳಿಸಿದರು.