ETV Bharat / state

ಕೃಷಿ ಸಚಿವ ಬಿ ಸಿ ಪಾಟೀಲ್​ ಹೇಳ್ತಾರೆ.. ದಿಲ್ಲಿಯಲ್ಲಿ ಪ್ರತಿಭಟಿಸುತ್ತಿರೋರು ರೈತರಲ್ವಂತೆ, ಭಯೋತ್ಪಾದಕರಂತೆ.. - ಕೊಪ್ಪಳ ಸುದ್ದಿ

minister B C Patil
ಬಿ.ಸಿ. ಪಾಟೀಲ್​
author img

By

Published : Jan 26, 2021, 4:30 PM IST

Updated : Jan 26, 2021, 5:13 PM IST

16:21 January 26

ಪ್ರಧಾನಿ ಮೋದಿ ಜನಪ್ರಿಯತೆ ಕಂಡು ಕಾಂಗ್ರೆಸ್​ನವರು ಹತಾಶರಾಗಿದ್ದಾರೆ. ಮೋದಿ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ..

ಬಿ.ಸಿ.ಪಾಟೀಲ್, ಕೃಷಿ ಸಚಿವರು

ಕೊಪ್ಪಳ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರೋರು ರೈತರಲ್ಲ ಅವರು ಭಯೋತ್ಪಾದಕರು. ಇವರಿಗೆ ಕಾಂಗ್ರೆಸ್ ಪಕ್ಷ ಬೆಂಬಲವಾಗಿ ನಿಂತಿದೆ‌‌ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ನಗರದಲ್ಲಿ ಮಾತನಾಡಿದ ಅವರು, ದೆಹಲಿಯ ಪ್ರತಿಭಟನಾಕಾರರಿಗೆ ಬೇರೆ ಬೇರೆ ದೇಶಗಳ ಹಿನ್ನೆಲೆಯಿದೆ. ಪಾಕಿಸ್ತಾನ ಈ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿದೆ. ಕೆಂಪುಕೋಟೆ ಬಳಿ ಹೋಗಿ ಗಲಾಟೆ ಮಾಡ್ತಾರೆ ಅಂದರೆ ನೀವೇ ಅರ್ಥ ಮಾಡಿಕೊಳ್ಳಿ. ಇದೊಂದು ಭಯೋತ್ಪಾದಕ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಾಟ್ಸ್‌ಆ್ಯಪ್ ಪ್ರೈವಸಿ.. ನಾಗರಿಕರ ಗೌಪ್ಯತೆ ಸರ್ಕಾರದ ಜವಾಬ್ದಾರಿ..

ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಕಂಡು ಕಾಂಗ್ರೆಸ್​ನವರು ಹತಾಶರಾಗಿದ್ದಾರೆ. ಮೋದಿ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ ಅಂದುಕೊಂಡವರು, ಭಯೋತ್ಪಾದಕರನ್ನು ಕರೆತಂದು ಅವರಿಗೆ ರೈತರ ಹೆಸರಿಟ್ಟು ಭಯೋತ್ಪಾದನೆ ಮಾಡಿಸಿದ್ದಾರೆ. 

ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಯಾರೇ ಕಾನೂನು ಕೈಗೆ ತೆಗೆದುಕೊಂಡರು ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗವುದು ಎಂದು ಸಚಿವ ಬಿ ಸಿ ಪಾಟೀಲ್ ಹೇಳಿದ್ದಾರೆ.

Last Updated : Jan 26, 2021, 5:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.