ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾಣಾಪುರ ಬಳಿ ಸ್ಥಾಪನೆಯಾಗುತ್ತಿರುವ ಆಟಿಕೆ ವಸ್ತುಗಳ ತಯಾರಿಕಾ ಕ್ಲಸ್ಟರ್ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷಿ ಸಚಿವ ಬಿ.ಸಿ. ಪಾಟೀಲ್ ಭೇಟಿ ನೀಡಿದರು.
ಯಲಬುರ್ಗಾ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದ ನಂತರ ಕ್ಲಸ್ಟರ್ ಸ್ಥಳಕ್ಕೆ ಭೇಟಿ ನೀಡಿ, ಕಂಪನಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಆಟಿಕೆ ತಯಾರಿಕಾ ಕ್ಲಸ್ಟರ್ ಸ್ಥಾಪನೆಗೆ ಬೇಕಾದ ಭೂಮಿ, ಸೃಷ್ಠಿಯಾಗುವ ಉದ್ಯೋಗ ಸಂಖ್ಯೆ, ಉದ್ಯಮ ಯಾವಾಗ ಪ್ರಾರಂಭವಾಗುತ್ತದೆ ಎಂಬ ವಿಷಯ ಸೇರಿದಂತೆ ವಿವಿಧ ಮಾಹಿತಿಯನ್ನು ಕಂಪನಿಯ ಅಧಿಕಾರಿಗಳು ಸಚಿವ ಪಾಟೀಲ್ ಹಾಗೂ ಶಾಸಕ ಹಾಲಪ್ಪ ಆಚಾರ್ಗೆ ಮಾಹಿತಿ ನೀಡಿದರು.
ಮುಂದಿನ ಜೂನ್, ಜುಲೈ ವೇಳೆಗೆ ಕಾರ್ಯಾರಂಭ ಮಾಡುವ ಕುರಿತಂತೆ ಕಂಪನಿಯ ಅಧಿಕಾರಿಗಳು ಹೇಳಿದರು. ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಸೇರಿದಂತೆ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು.