ಕೊಪ್ಪಳ: ಕೊರೊನಾ ಭೀತಿಯ ನಡುವೆ ಜೂನ್ 25 ರಿಂದ ಪ್ರಾರಂಭಗೊಂಡಿರುವ ಎಸ್ಎಸ್ಎಲ್ಸಿ ಪರೀಕ್ಷೆಯ ಗಣಿತ ವಿಷಯದ ಪರೀಕ್ಷೆ ಇಂದು ನಡೆಯುತ್ತಿದೆ.
ಪರೀಕ್ಷಾ ಕೇಂದ್ರಗಳಿಗೆ ಬಂದ ವಿದ್ಯಾರ್ಥಿಗಳಿಗೆ ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು ಥರ್ಮಲ್ ಸ್ಕೀನಿಂಗ್ ನಡೆಸಿದರು. ನಗರಸಭೆ ಸಿಬ್ಬಂದಿ ಪರೀಕ್ಷಾ ಕೇಂದ್ರದ ಆವರಣದಲ್ಲಿ ಸ್ಯಾನಿಟೈಸ್ ಮಾಡಿದರು.
ಜಿಲ್ಲೆಯಾದ್ಯಂತ 80 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.