ETV Bharat / state

ಅಂಜನಾದ್ರಿ ಬೆಟ್ಟದಲ್ಲಿ ನಾಳೆ ನಡೆಯುವ ಹನುಮಮಾಲೆ ವಿಸರ್ಜನೆಗೆ ಕೊನೆಯ ಕ್ಷಣದ ಸಿದ್ಧತೆ - hanumamala immersion

ಅಂಜನಾದ್ರಿ ಬೆಟ್ಟದಲ್ಲಿ ಭಾನುವಾರ ನಡೆಯುವ ಹನುಮಮಾಲೆ ವಿಸರ್ಜನೆಗೆ ಕೊನೆಯ ಕ್ಷಣದ ಸಿದ್ಧತೆಗಳು ಪೂರ್ಣಗೊಂಡಿದೆ.

All preparation for hanumamala immersion at anjanadri hill
ಅಂಜನಾದ್ರಿ ಬೆಟ್ಟದಲ್ಲಿ ನಾಳೆ ನಡೆಯುವ ಹನುಮಮಾಲೆ ವಿಸರ್ಜನೆಗೆ ಕೊನೆಯ ಕ್ಷಣದ ಸಿದ್ಧತೆ
author img

By ETV Bharat Karnataka Team

Published : Dec 23, 2023, 7:23 PM IST

ಗಂಗಾವತಿ (ಕೊಪ್ಪಳ): ಹನುಮ ಜಯಂತಿ ಅಂಗವಾಗಿ ತಾಲೂಕಿನ ಚಿಕ್ಕರಾಂಪೂರದ ಬಳಿ ಇರುವ ಧಾರ್ಮಿಕ ತಾಣ ಅಂಜನಾದ್ರಿಯಲ್ಲಿ ಕೊನೆಯ ಕ್ಷಣದ ಸಿದ್ಧತೆಗಳು ಪೂರ್ಣಗೊಂಡಿದ್ದು, ಹನುಮಮಾಲೆ ವಿಸರ್ಜನೆಗೆ ಕ್ಷಣಗಣನೆ ಆರಂಭವಾಗಿದೆ. ಜಿಲ್ಲಾಧಿಕಾರಿ ನಲೀನ್ ಅತುಲ್ ಕಳೆದ ಎರಡು ದಿನಗಳಿಂದ ಸ್ಥಳದಲ್ಲಿ ಬಿಡಾರ ಹೂಡಿದ್ದು, ಅಧಿಕಾರಿಗಳಿಗೆ ನಿರ್ದೇಶನ ನೀಡುತ್ತಿದ್ದಾರೆ. ಶಾಸಕ ಜಿ.ಜನಾರ್ದನ ರೆಡ್ಡಿ ಉಸ್ತುವಾರಿ ವಹಿಸಿಕೊಂಡಿದ್ದು, ಅಂತಿಮ ಹಂತದ ಸಿದ್ಧತೆಗಳನ್ನು ಶನಿವಾರ ಪರಿಶೀಲಿಸಿದರು.

all-preparation-for-hanumamala-immersion-at-anjanadri-hill
ಅಂಜನಾದ್ರಿ ಬೆಟ್ಟದಲ್ಲಿ ನಾಳೆ ನಡೆಯುವ ಹನುಮಮಾಲೆ ವಿಸರ್ಜನೆಗೆ ಕೊನೆಯ ಕ್ಷಣದ ಸಿದ್ಧತೆ

ಭಾನುವಾರ ನಡೆಯುವ ಹನುಮಮಾಲೆ ವಿಸರ್ಜನೆಗೆ ರಾಜ್ಯದ ನಾನಾ ಜಿಲ್ಲೆಗಳಿಂದ ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ಭಾಗಿಯಾಗುವ ನಿರೀಕ್ಷೆಯಿದ್ದು, ಇದಕ್ಕಾಗಿ ಜಿಲ್ಲಾಡಳಿತ ಕುಡಿಯುವ ನೀರು, ಪಾರ್ಕಿಂಗ್​ ವ್ಯವಸ್ಥೆ, ಊಟ, ವಸತಿ, ಶೌಚಾಲಯದಂತಹ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದೆ. ಭಕ್ತರ ಅನುಕೂಲಕ್ಕಾಗಿ ಇದೇ ಮೊದಲ ಬಾರಿಗೆ ಜಿಲ್ಲಾಡಳಿತ ಹಲವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಭಕ್ತರು ತಮ್ಮ ಮೊಬೈಲ್​ನಲ್ಲಿ ಕ್ಯೂರ್ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅಂಜನಾದ್ರಿಯಲ್ಲಿ ಕಲ್ಪಿಸಿರುವ ಸೌಲಭ್ಯಗಳ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

All preparation for hanumamala immersion at anjanadri hill
ಅಂಜನಾದ್ರಿ ಬೆಟ್ಟದಲ್ಲಿ ನಾಳೆ ನಡೆಯುವ ಹನುಮಮಾಲೆ ವಿಸರ್ಜನೆಗೆ ಕೊನೆಯ ಕ್ಷಣದ ಸಿದ್ಧತೆ
all-preparation-for-hanumamala-immersion-at-anjanadri-hill
ಅಂಜನಾದ್ರಿ ಬೆಟ್ಟದಲ್ಲಿ ನಾಳೆ ನಡೆಯುವ ಹನುಮಮಾಲೆ ವಿಸರ್ಜನೆಗೆ ಕೊನೆಯ ಕ್ಷಣದ ಸಿದ್ಧತೆ

ಸಂಜೆಯ ಹೊತ್ತಲ್ಲಿ ಅಂಜನಾದ್ರಿ ಆಕರ್ಷಕವಾಗಿ ಕಾಣುವಂತೆ ಮಾಡಲು ಇಡೀ ಬೆಟ್ಟಕ್ಕೆ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇದೇ ಮೊದಲ ಬಾರಿ ಶನಿವಾರದಿಂದ ಅಂಜನಾದ್ರಿಯ ಮುಖ್ಯ ದೇಗುಲದಲ್ಲಿ ನಡೆಯುವ ಪೂಜೆಯನ್ನು ನೇರ ಪ್ರಸಾರ ಮಾಡುವ ಮೂಲಕ ಭಕ್ತರು ತಾವಿದ್ದ ಸ್ಥಳದಲ್ಲಿಯೇ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿದೆ.

ಹನುಮಂತ ದೇವರ ಪಾದಗಟ್ಟೆಯಲ್ಲಿ ಆಕರ್ಷಕ ಹೂವಿನ ಅಲಂಕಾರ ಮಾಡಲಾಗಿದ್ದು, ಭಕ್ತರನ್ನು ಸ್ವಾಗತಿಸಿ ಮತ್ತು ಮಾಹಿತಿ ನೀಡುವ ಉದ್ದೇಶಕ್ಕೆ ಅಲ್ಲಲ್ಲಿ ಬ್ಯಾನರ್ ಅಳವಡಿಸಿ ಮಾಹಿತಿ ನೀಡಲಾಗಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಉತ್ತಮ ವ್ಯವಸ್ಥೆ ಕಲ್ಪಿಸುವ ಮೂಲಕ ಜಿಲ್ಲಾಡಳಿತ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ.

ಭಾನುವಾರ ಬೆಟ್ಟದ ಮೇಲೆ ದಟ್ಟಣೆ ಅಧಿಕವಾಗುವ ಹಿನ್ನೆಲೆ ಶನಿವಾರ ಮಧ್ಯಾಹ್ನದಿಂದಲೇ ಭಕ್ತರ ದಂಡು ಅಂಜನಾದ್ರಿಯತ್ತ ದೌಡಾಯಿಸುತ್ತಿದೆ. ಕೆಲವರು ಪೂಜೆ ಮಾಡಿ ಮಾಲೆ ವಿಸರ್ಜನೆ ಮಾಡುತ್ತಿದ್ದರೆ, ಮತ್ತಷ್ಟು ಜನ ದೇವರ ದರ್ಶನ ಪಡೆದು ವಸತಿ ಮಾಡಿ ಬೆಳಗ್ಗೆ ಮಾಲಾ ವಿಸರ್ಜನೆ ಮಾಡುವ ಯೋಜನೆ ರೂಪಿಸಿಕೊಂಡಿದ್ದಾರೆ.

ಶನಿವಾರ ರಾತ್ರಿ ಊಟಕ್ಕಾಗಿ ಭಕ್ತರು ಮತ್ತು ಕರ್ತವ್ಯ ನಿರತ ಹತ್ತು ಸಾವಿರ ಜನರಿಗೆ ವೇದಪಾಠ ಶಾಲೆಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ ಹದಿನೈದು ಸಾವಿರ ಜನರಿಗೆ ಉಪಹಾರ, 30 ಸಾವಿರ ಜನರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂಜನಾದ್ರಿ ಬೆಟ್ಟದ ಸುತ್ತಲೂ ಮತ್ತು ಪಾರ್ಕಿಂಗ್​ ಸ್ಥಳದ ವೀಕ್ಷಣೆಗಾಗಿ ಸುಮಾರು ಐನೂರು ಮೀಟರ್ ಎತ್ತರದಿಂದ ಡ್ರೋನ್​ ಕ್ಯಾಮರಾದಿಂದ ದೃಶ್ಯಗಳನ್ನು ಸೆರೆ ಹಿಡಿಯಲಾಗಿದ್ದು, ಭಾನುವಾರ ಏರ್ಪಡಬಹುದಾದ ವಾಹನಗಳ ದಟ್ಟಣೆ ತಡೆಯಲು ಪೊಲೀಸರು ಯೋಜನೆ ರೂಪಿಸಿಕೊಂಡಿದ್ದಾರೆ.

ಮಾಸ್ಕ್​ ಕಡ್ಡಾಯ: ರಾಜ್ಯದಲ್ಲಿ ಕೊರೊನಾ ಜೆಎನ್-1 ತಳಿಯ ಸೋಂಕು ಹರಡುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಜನಾದ್ರಿ ಬೆಟ್ಟಕ್ಕೆ ಬರುವ ಭಕ್ತರಿಗೆ ಮಾಸ್ಕ್ ಕಡ್ಡಾಯಗೊಳಿಸಿ ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆದೇಶ ನೀಡಿದೆ. 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಿದೆ. ಅಲ್ಲದೇ ಜ್ವರ, ನೆಗಡಿ, ಶೀತದಂತಹ ಸಾಮಾನ್ಯ ಲಕ್ಷಣ ಹೊಂದಿರುವ ವ್ಯಕ್ತಿಗಳಿಗೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ.

ಇದನ್ನೂ ಓದಿ: ಅಂಜನಾದ್ರಿಯ ಆಂಜನೇಯನ ಕಾಣಿಕೆ ಹುಂಡಿಯಲ್ಲಿ ಅಮೆರಿಕ, ಸೌದಿ ಅರೇಬಿಯಾ, ಇಂಗ್ಲೆಂಡ್ ಸೇರಿ ಹಲವು ವಿದೇಶಿ ಕರೆನ್ಸಿ ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.