ಕೊಪ್ಪಳ: ಅಂಗನವಾಡಿಯ ಮಕ್ಕಳಿಗೆ ನೀಡಿದ್ದ ಆಹಾರ ಪದಾರ್ಥಗಳನ್ನು ಕಾರ್ಯಕರ್ತೆಯೊಬ್ಬರು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಜಿಲ್ಲೆಯ ಕುಷ್ಠಗಿ ತಾಲೂಕಿನ ಹೆಸರೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಯಂಕಮ್ಮ ದಾಸರ್ ಎಂಬುವರು ಅಂಗನವಾಡಿ ಮಕ್ಕಳಿಗೆ ನೀಡಿದ್ದ ಬೇಳೆ, ಬೆಲ್ಲ, ಗೋಧಿ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ನೋಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಕ್ಕಳಿಗೆ ನೀಡಿದ್ದ ಆಹಾರ ಪದಾರ್ಥಗಳನ್ನು ಸುಮಾರು ತಿಂಗಳಿಂದ ಇವರು ಮನೆಗೆ ಸಾಗಿಸುತ್ತಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇಂದು ಮನೆಗೆ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗುತ್ತಿದ್ದಾಗ ರೆಡ್‍ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು ಅಂಗನವಾಡಿ ಕಾರ್ಯಕರ್ತೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.