ಗಂಗಾವತಿ (ಕೊಪ್ಪಳ): ತಾಲೂಕಿನಲ್ಲಿ ಕೇಂದ್ರ ಸರ್ಕಾರದ ನರೇಗಾ ಯೋಜನೆ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಕ್ಕೆ ತರಲಾದ ನಾನಾ ಕಾಮಗಾರಿಗಳ ಪರಿಶೀಲನೆ ನಡೆಸುವ ಉದ್ದೇಶದಿಂದ ಸಾಮಾಜಿಕ ಅರಣ್ಯ ಇಲಾಖೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ಅರೆಕಲ್ ವಡ್ಡರಹಟ್ಟಿಯ ನರ್ಸರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅರಣ್ಯೀಕರಣ ಮಾಡುವುದು ಮತ್ತು ಪರಿಸರವನ್ನು ಸಂರಕ್ಷಿಸುವ ಕೆಲಸ ಕೇವಲ ನಮ್ಮ ಇಲಾಖೆ ಮತ್ತು ಸಿಬ್ಬಂದಿಯಿಂದ ಮಾತ್ರವೇ ಸಾಧ್ಯವಾಗದು. ಅದಕ್ಕೆ ಜನರ ಬೆಂಬಲ, ರಾಜಕೀಯ ವಲಯದ ಸಹಕಾರ ಅಗತ್ಯ. ಅರಣ್ಯ ಮತ್ತು ಪರಿಸರ ಅತ್ಯಂತ ಸೂಕ್ಷ್ಮ ವಲಯವಾಗಿದ್ದು, ಇದರ ಸಂರಕ್ಷಣೆಯ ಹೊಣೆ ಪ್ರತಿಯೊಬ್ಬರಲ್ಲೂ ಇರಬೇಕು. ಕಾಡು ಇದ್ದರೆ ವೈವಿಧ್ಯಮಯ ಪ್ರಾಣಿ, ಪಕ್ಷಿ ಸಂಕುಲಗಳ ವಿಕಸನಕ್ಕೆ ಕಾರಣವಾಗುತ್ತದೆ. ಮಾನವನ ವಿಕಸನ ಪ್ರಕೃತಿಯಲ್ಲಿನ ಪ್ರತಿಯೊಂದು ಅಂಶಗಳ ಮೇಲೆ ಅವಲಂಬಿಸಿರುತ್ತದೆ ಎಂದರು.
ಈ ನಿಟ್ಟಿನಲ್ಲಿ ಇಲಾಖೆಯ ಗುರಿ, ಉದ್ದೇಶ ಮತ್ತು ಯೋಜನೆಗಳ ಅನುಷ್ಠಾನ ಕಾರ್ಯವನ್ನು ಸಿಬ್ಬಂದಿಗಳು ಅಚ್ಚುಕಟ್ಟಾಗಿ ಮಾಡುತ್ತಾರೆ. ಆದರೆ ಅರಣ್ಯವನ್ನು ಉಳಿಸುವ ಬೆಳೆಸುವ ನಿಟ್ಟಿನಲ್ಲಿ ಸಮಾಜದ ಜವಾಬ್ದಾರಿಯೂ ಪ್ರಮುಖವಾಗಿದೆ ಎಂದು ಅರೆಕಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ನಿಟ್ಟಿನಲ್ಲಿ ಇಲಾಖೆಯ ಗುರಿ, ಉದ್ದೇಶ ಮತ್ತು ಯೋಜನೆಗಳ ಅನುಷ್ಠಾನ ಕಾರ್ಯವನ್ನು ಸಿಬ್ಬಂದಿಗಳು ಅಚ್ಚುಕಟ್ಟಾಗಿ ಮಾಡುತ್ತಾರೆ. ಆದರೆ ಅರಣ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಮಾಜದ ಜವಾಬ್ದಾರಿಯೂ ಪ್ರಮುಖವಾಗಿದೆ ಎಂದು ಅರೆಕಲ್ ಅಭಿಪ್ರಾಯ ವ್ಯಕ್ತಪಡಿಸಿದರು.