ಕೊಪ್ಪಳ: ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ ಒಟ್ಟು 29ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದ 32 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ಜಿಂದಾಲ್ ಉದ್ಯೋಗಿಯಾಗಿದ್ದು, ಪ್ರತಿನಿತ್ಯ ಮರಳಿಯಿಂದ ಜಿಂದಾಲ್ಗೆ ಬೈಕ್ನ ಮೂಲಕ ಹೋಗಿ ಬರುತ್ತಿದ್ದ. ಈತನನ್ನು ಜೂ.14 ರಂದು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಬಳಿಕ ಜೂ. 18 ರಂದು ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಸೋಂಕು ದೃಢಪಟ್ಟಿದ್ದು, ಈತನ 8 ಜನ ಪ್ರಾಥಮಿಕ ಹಾಗೂ 4 ಜನ ದ್ವಿತೀಯ ಸಂರ್ಪಕಿತರನ್ನು ಪತ್ತೆ ಹಚ್ಚಲಾಗಿದೆ.
ಇನ್ನು ಜಿಲ್ಲೆಯಲ್ಲಿ ಈವರೆಗೆ ಒಟ್ಟು 29 ಜನರು ಸೋಂಕಿತರಲ್ಲಿ 12 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಓರ್ವ ಮಹಿಳೆ ಸೋಂಕಿಗೆ ಬಲಿಯಾಗಿದ್ದು, ಉಳಿದಂತೆ 16 ಜನ ಸಕ್ರೀಯ ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.