ETV Bharat / state

ಕುಷ್ಟಗಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರ ಬಂಧನ - Arrest of three Gamblers in koppal

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರನ್ನು ಕುಷ್ಟಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 18,500 ರೂ. ನಗದು ಹಾಗೂ ಎರಡು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

koppal
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರ ಬಂಧನ
author img

By

Published : Apr 30, 2021, 1:29 PM IST

ಕುಷ್ಟಗಿ (ಕೊಪ್ಪಳ): ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರನ್ನು ಕುಷ್ಟಗಿ ಪೊಲೀಸರು ಬಂಧಿಸಿದ್ದಾರೆ.

ಅಂಬೇಡ್ಕರ್ ನಗರದ ನಿವಾಸಿ ಅಮರೇಶ ಹಿರೇಮನಿ, ಮುಲ್ಲಾರ ಓಣಿಯ ಇಮಾಮ್ ದಾವುಲಸಾಬ್ ವಾಲೀಕಾರ ಹಾಗೂ ಇಂದಿರಾ ನಗರದ ವೀರನಗೌಡ ಬಸನಗೌಡ ಪೊಲೀಸ್ ಪಾಟೀಲ ಬಂಧಿತ ಆರೋಪಿಗಳು. ಇವರು ಕುಷ್ಟಗಿ ಹೊರವಲಯದ ಟೆಂಗುಂಟಿ ಕ್ರಾಸ್ ಬಳಿ ಬೆಟ್ಟಿಂಗ್ ನಡೆಸುತ್ತಿದ್ದರು.

ಈ ಬಗ್ಗೆ ಖಚಿತ ಮಾಹಿತಿ ತಿಳಿದ ಪೊಲೀಸರು, ದಾಳಿ ಮಾಡಿ ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತರಿಂದ 18,500 ರೂ. ನಗದು ಹಾಗೂ ಎರಡು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಗುರುವಾರ ಕೂಡ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ಸನ್‌ ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರನ್ನು ತಾವರಗೇರಾ ಪೊಲೀಸರು ಬಂಧಿಸಿದ್ದರು. ಬಂಧಿತರಿಂದ 12,500 ರೂ. ಹಾಗೂ ಮೊಬೈಲ್ ವಶಪಡಿಸಿಕೊಳ್ಳಲಾಗಿತ್ತು.

ಓದಿ: ರಾಮನಗರ ನಗರಸಭೆ ಚುನಾವಣೆ: ಭಾರೀ ಮತಗಳಿಂದ ಗೆದ್ದ ಕೋವಿಡ್​ಗೆ ಬಲಿಯಾದ ಅಭ್ಯರ್ಥಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.