ETV Bharat / state

ತುಂಗಭದ್ರಾ ನದಿಯ ಒಡಲು ಬಗೆಯುವ ದಂಧೆಕೋರರು.. ಅಕ್ರಮ ಮರಳು ಅಡ್ಡೆ ಮೇಲೆ ದಾಳಿ.. - ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್​

ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿರುವ ಬಗ್ಗೆ ನಾಗರಹಳ್ಳಿಯ ಜನರು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್​ ಅವರಿಗೆ ದೂರು ನೀಡಿದ್ದರು. ಆ ದೂರು ಆಧರಿಸಿಯೇ ಈಗ ದಾಳಿ ನಡೆಸಲಾಗಿದೆ.

Attack on illegal sand maffiya in gangavathi
ಅಕ್ರಮ ಮರಳು ಅಡ್ಡೆ ಮೇಲೆ ದಾಳಿ..ಅಪಾರ ಪ್ರಮಾಣದ ಮರಳು ವಶಕ್ಕೆ
author img

By

Published : May 9, 2020, 12:19 PM IST

ಗಂಗಾವತಿ : ನಗರದ ಹಿರೇಜಂತಕಲ್ ಪ್ರದೇಶದ ಸಮೀಪದಲ್ಲಿರುವ ನಾಗರಹಳ್ಳಿಯಲ್ಲಿರುವ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿರುವ ಅಡ್ಡೆಗಳ ಮೇಲೆ ಡಿಸಿ ನಿರ್ದೇಶನದ‌‌ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಮರಳು ಅಡ್ಡೆ ಮೇಲೆ ದಾಳಿ.. ಅಪಾರ ಪ್ರಮಾಣದ ಮರಳು ವಶಕ್ಕೆ

ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿರುವ ಬಗ್ಗೆ ನಾಗರಹಳ್ಳಿಯ ಜನರು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್​ ಅವರಿಗೆ ದೂರು ನೀಡಿದ್ದರು. ಕೂಡಲೇ ಎಚ್ಚೆತ್ತ ಜಿಲ್ಲಾಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳನ್ನ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು. ಡಿಸಿ ಸೂಚನೆ ಮೇರೆಗೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಮರಳು ಮಾಫಿಯಾದಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ.

ನದಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಅಪಾರ ಪ್ರಮಾಣದ‌ ಮರಳು ವಶಕ್ಕೆ ಪಡೆದಿರುವ ಅಧಿಕಾರಿಗಳ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.