ETV Bharat / state

ಕುಷ್ಟಗಿ: ಕೋವಿಡ್ ಮಾರ್ಗಸೂಚಿ ಪಾಲಿಸದ ಖಾಸಗಿ ಆಸ್ಪತ್ರೆಗಳ ಮೇಲೆ ಅಧಿಕಾರಿಗಳ ದಾಳಿ - Attack on unauthorized clinics in Tavaregara

ಕೊಪ್ಪಳ ಜಿಲ್ಲೆಯ ಕುಷ್ಟಗಿಯ ತಾವರಗೇರಾದಲ್ಲಿ ಅನಧಿಕೃತ ಕ್ಲಿನಿಕ್​ಗಳಿಗೆ ಬೀಗ ಜಡಿದ ಅಧಿಕಾರಿಗಳು ದಾಖಲೆ ಹಾಜರುಪಡಿಸುವಂತೆ ಸೂಚಿಸಿದ್ದಾರೆ.

dsc
ಖಾಸಗಿ ಆಸ್ಪತ್ರೆಗಳ ಮೇಲೆ ಅಧಿಕಾರಿಗಳ ದಾಳಿ
author img

By

Published : Sep 17, 2020, 9:16 AM IST

ಕುಷ್ಟಗಿ(ಕೊಪ್ಪಳ): ಕೋವಿಡ್ ಮಾರ್ಗಸೂಚಿ ಪಾಲಿಸದ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ 6 ಖಾಸಗಿ ಆಸ್ಪತ್ರೆಗಳ ಮೇಲೆ ಅಧಿಕಾರಿಗಳು ದಿಢೀರ್ ದಾಳಿ‌ ನಡೆಸಿದ್ದಾರೆ.

ದಾಳಿಯ ವೇಳೆ ನೆಗಡಿ, ಕೆಮ್ಮು, ಜ್ವರ, ಗಂಟಲು ನೋವು ಲಕ್ಷಣಗಳಿಗೆ ಖಾಸಗಿ ವೈದ್ಯರು ಚಿಕಿತ್ಸೆ ನೀಡಿರುವುದು ಕಂಡು ಬಂದಿದ್ದರಿಂದ ಅಧಿಕಾರಿಗಳು ವೈದ್ಯರನ್ನು ತರಾಟೆ ತೆಗೆದುಕೊಂಡರು. ಇನ್ಮುಂದೆ ಈ ರೋಗ ಲಕ್ಷಣ ಕಂಡು ಬಂದರೆ ರೋಗಿಗಳ ವಿವರವನ್ನು ಸರ್ಕಾರಿ ಆಸ್ಪತ್ರೆಗೆ ನೀಡಬೇಕು. ನಂತರ ಮೂರು ದಿನಗಳ ಬಳಿಕ ಪರಿಶೀಲಿಸಿ ದಾಖಲೆಯ ನಿರ್ವಹಣೆ ಬಗ್ಗೆ ಪರಿಶೀಲಿಸಲಾಗುವುದು. ಇದನ್ನು ಪಾಲಿಸದೆ ಇದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮದ ಎಚ್ಚರಿಕೆ ನೀಡಿದರು.

ಈ ಕುರಿತು ಮಾತನಾಡಿದ ತಹಶೀಲ್ದಾರ್​ ಎಂ.ಸಿದ್ದೇಶ್,​ ತಾವರಗೇರಾದಲ್ಲಿ ಕೊರೊನಾ ಅಧಿಕಾವಗಿ ವ್ಯಾಪಿಸಿದ್ದು, ಸಾವಿನ ಸಂಖ್ಯೆಯೂ ಅಧಿಕವಾಗಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಅಪನಂಬಿಕೆ ಹೋಗಲಾಡಿಸಿ ಸೋಂಕಿತರು ಕೋವಿಡ್ ಟೆಸ್ಟ್ ಮಾಡಿಸಿ ವೈದ್ಯರ ಸಲಹೆ ಪಾಲಿಸಿ ರೋಗ ವ್ಯಾಪಿಸುವುದನ್ನು ನಿಯಂತ್ರಿಸಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.