ETV Bharat / state

ಪಕ್ಷಾತೀತ, ಜಾತ್ಯತೀತವಾಗಿ ಕೊರೊನಾ ವಿರುದ್ಧ ಹೋರಾಡಬೇಕಿದೆ: ಲಕ್ಷ್ಮಣ ಸವದಿ - awareness about corona virus in koppal

ಕೊರೊನಾ ವೈರಸ್​ ನಿಯಂತ್ರಣಕ್ಕೆ ಜಿಲ್ಲಾಡಳಿತ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಬಳ್ಳಾರಿ ಮತ್ತು ಗದಗದಲ್ಲಿ ಕೊರೊನಾ ವೈರಸ್​ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ಈ ಎರಡು ಜಿಲ್ಲೆಗಳ ನಡುವೆ ಇರುವ ಕೊಪ್ಪಳದಲ್ಲಿ ಮತ್ತಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

awareness-about-corona-virus-in-koppal
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ
author img

By

Published : Apr 7, 2020, 8:19 PM IST

ಕೊಪ್ಪಳ: ದೇಶಕ್ಕೆ ಬಂದಿರುವ ಕೊರೊನಾ ಕಂಟಕ ನಿವಾರಿಸಲು ನಾವೆಲ್ಲರೂ ಪಕ್ಷಾತೀತ, ಜಾತ್ಯತೀತವಾಗಿ ಹೋರಾಟ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸುದೈವದಿಂದ ಕೊಪ್ಪಳದಲ್ಲಿ ಈವರೆಗೂ ಯಾರಿಗೂ ತಗುಲಲಿಲ್ಲ. ಬಳ್ಳಾರಿ ಹಾಗೂ ಗದಗದಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. ಈ ಎರಡು ಜಿಲ್ಲೆಗಳ ನಡುವೆ ಇರುವ ಕೊಪ್ಪಳದ ಜನತೆ ಎಚ್ಚರವಾಗಿರಬೇಕು. ನಿರ್ಲಕ್ಷಿಸಬಾರದು ಎಂದು ಮನವಿ ಮಾಡಿದರು.

ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ವೈದ್ಯಕೀಯ ಸಿಬ್ಬಂದಿ, ಅಧಿಕಾರಿ, ಸಿಬ್ಬಂದಿ, ಆಶಾ ಕಾರ್ಯಕರ್ತರು ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಅವರ ರಕ್ಷಣೆಗೆ ಮಾಸ್ಕ್ ಸೇರಿದಂತೆ ಇತರೆ ಸೌಲಭ್ಯ ನೀಡಲು ಚರ್ಚಿಸಲಾಗಿದೆ ಎಂದರು.

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೂಚನೆಗಳನ್ನು ಎಲ್ಲಾ ಸಾರ್ವಜನಿಕರು ಪಾಲಿಸುವ ಮೂಲಕ ಸಹಕರಿಸಬೇಕು. ಆಗ ಮಾತ್ರ ಕೊರೊನಾವನ್ನು ಹೊಡೆದೋಡಿಸಬಹುದು. ಹೊರ ರಾಜ್ಯದಿಂದ ಜಿಲ್ಲೆಗೆ ಬಂದಿರುವ 174 ಮಂದಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ. ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ ಪಡಿತರವನ್ನು ಮನೆ ಮನೆಗೆ ತಲುಪಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿ ಪಡಿತರ ವಿತರಕರು ತಿಂಗಳು ಪೂರ್ತಿ ನ್ಯಾಯಬೆಲೆ ಅಂಗಡಿ ತೆರೆದು ಪಡಿತರ ಹಂಚಬೇಕು. ರೇಷನ್ ಕಾರ್ಡ್ ಇಲ್ಲದವರಿಗೂ ಕೊರೊನಾ ಕಾಟ ಮುಗಿಯುವ ತನಕ ಪಡಿತರ ವಿತರಿಸಲು ನಿರ್ಧರಿಸಲಾಗಿದೆ. ವ್ಯಾಪಾರಿಗಳು ಜನರಿಂದ ಹೆಚ್ಚಿನ ಹಣ ಸುಲಿಗೆ ಮಾಡಿದರೆ ಅಂತಹರ ಮೇಲೆ ಕ್ರಮ ಕೈಗೊಳ್ಳಲಾಗುವುದು‌ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.