ಗಂಗಾವತಿ: ಕೇಂದ್ರ ಸರ್ಕಾರದ ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಕೂಲಿ ಕಾರ್ಮಿಕರಿಗೆ ಆರೋಗ್ಯ ಮತ್ತು ಮಾಸಿಕ ಋತುಚಕ್ರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮಹಿಳಾ ಕೂಲಿ ಕಾರ್ಮಿಕರಿಗೆ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಸಂವಹನ ಅಧಿಕಾರಿ ಬಸಮ್ಮ ಜಾಗೃತಿ ಮೂಡಿಸಿದರು. ಮಾಸಿಕ ಋತುಚಕ್ರದ ಸಂದರ್ಭದಲ್ಲಿ ಆಗುವ ಸಮಸ್ಯೆ, ಇದನ್ನು ನಿರ್ಲಕ್ಷಿಸಿದರೆ ಆರೋಗ್ಯದ ಮೇಲೆ ಉಂಟಾಗುವ ಸಮಸ್ಯೆಯ ಬಗ್ಗೆ ವಿವರಣೆ ನೀಡಿದರು.
ತಾಲೂಕು ಪಂಚಾಯತಿ ಪಿಡಿಒ ಡಾ.ಡಿ. ಮೋಹನ್ ಮಾತನಾಡಿ, ಪ್ರತಿಯೊಬ್ಬ ಮಹಿಳೆಯರಿಗೂ ಋತುಚಕ್ರದ ಸಂದರ್ಭದಲ್ಲಿ ಅನೇಕ ಸಮಸ್ಯೆ ಎದುರಾಗುತ್ತದೆ. ಅಂತಹ ಸಂದರ್ಭದಲ್ಲಿ ಮುಕ್ತವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು, ಇಲ್ಲವಾದಲ್ಲಿ ಆರೋಗ್ಯದ ಸಮಸ್ಯೆ ಉದ್ಭವಿಸುತ್ತದೆ ಎಂದರು.