ಕೊಪ್ಪಳ: ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ನಗರದ ಪ್ರಸಿದ್ಧ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಗವಿಮಠದ ಕತೃ ಗದ್ದುಗೆಯ ದರ್ಶನ ಪಡೆದ ಬಳಿಕ ಮಠದ ಪೀಠಾಧಿಪತಿ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳಿಂದ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಶ್ರೀಮಠದ ಕಾರ್ಯ, ಇತಿಹಾಸ, ಸಾಮಾಜಿಕ ಕಾರ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ತಾವು ಈ ಮೊದಲು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ ಕುರಿತಂತೆ ಈ ಸಂದರ್ಭದಲ್ಲಿ ಅನುಭವ ಹಂಚಿಕೊಂಡರು.
ಲಾಕ್ಡೌನ್ ಹಿನ್ನೆಲೆ ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತಂತೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್ ಸೇರಿದಂತೆ ಇತರರು ಇದ್ದರು.