ETV Bharat / state

ತುಂಗಭದ್ರಾ ನದಿಯ ಜಲಾಶಯಕ್ಕೆ ಶಾಸಕ ರಾಘವೇಂದ್ರ ಹಿಟ್ನಾಳ್​ರಿಂದ ಬಾಗಿನ.. - Bagina Tungabhadra River

ತುಂಗಭದ್ರಾ ನದಿಯ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಿ, ಜಲಾಶಯಕ್ಕೆ ನೀರು ಹರಿದು ಬರಲು ಆರಂಭಿಸಿದ ಹಿನ್ನೆಲೆಯಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಜಲಾಶಯಕ್ಕೆ ಗುರುವಾರ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

bagina-tungabhadra-river
author img

By

Published : Aug 9, 2019, 11:07 AM IST

ಕೊಪ್ಪಳ: ತುಂಗಭದ್ರಾ ನದಿಯ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಜಲಾಶಯಕ್ಕೆ ಗುರುವಾರ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ತುಂಗಭದ್ರಾ ನದಿಯ ಜಲಾನಯನಕ್ಕೆ ರಾಘವೇಂದ್ರ ಹಿಟ್ನಾಳ್​ರಿಂದ ಬಾಗಿನ..

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು, ಜಲಾಶಯದ ಜಲಾನಯನ ಪ್ರದೇಶದಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ. ಇದರಿಂದಾಗಿ ಜಲಾಶಯಕ್ಕೆ ನೀರು ಹರಿದು ಬರಲು ಆರಂಭಿಸಿದೆ. ಇದು ಈ ಭಾಗದ ರೈತರಿಗೆ ಖುಷಿಯ ವಿಚಾರವಾಗಿದೆ. ಜಲಾಶಯದಲ್ಲಿ ಸುಮಾರು 48 ಟಿಎಂಸಿ ನೀರು ಸಂಗ್ರಹವಾಗಿದ್ದು, ನಿನ್ನೆಯಿಂದ ನಾಲೆಗೆ ನೀರು ಹರಿಸಲಾಗುತ್ತಿದೆ. ಈ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಮೊದಲು ಬೆಳೆಗಳಿಗಾಗಿ ನಾಲೆಗೆ ನೀರು ಹರಿಸುವಂತೆ ನಾವೂ ಸಹ ಸರ್ಕಾರಕ್ಕೆ ಮನವಿ ಮಾಡಿದ್ದೆವು ಎಂದರು‌.

ಇನ್ನೂ ಉತ್ತರ ಕರ್ನಾಟಕದಲ್ಲಿ ಆಗಿರುವ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಮರೋಪಾದಿಯಲ್ಲಿ ಪರಿಹಾರ ಕೆಲಸಗಳಾಗಬೇಕಿದೆ. ನೆರೆ ಸಂತ್ರಸ್ತರ ನೆರವಿಗಾಗಿ ತುರ್ತು ಕೆಲಸಗಳಾಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಪರಿಹಾರ ಕಾರ್ಯವನ್ನು ಯುದ್ಧೋಪಾದಿಯಲ್ಲಿ ಮಾಡಬೇಕು ಎಂದು ಆಗ್ರಹಿಸಿದರು.

Intro:

Body:ಕೊಪ್ಪಳ:- ತುಂಗಭದ್ರಾ ನದಿಯ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಜಲಾಶಯಕ್ಕೆ ಇಂದು ಪೂಜೆ ಸಲ್ಲಿಸಿದರು. ಜಲಾಶಯದ ಕೊಪ್ಪಳ ಭಾಗದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು, ಜಲಾಶಯದ ಜಲಾನಯನ ಪ್ರದೇಶದಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ. ಇದರಿಂದಾಗಿ ಜಲಾಶಯಕ್ಕೆ ನೀರು ಹರಿದು ಬರಲು ಆರಂಭಿಸಿದೆ. ಇದು ಈ ಭಾಗದ ರೈತರಿಗೆ ಖುಷಿಯ ವಿಚಾರವಾಗಿದೆ. ಜಲಾಶಯದಲ್ಲಿ ಇಂದು ಸುಮಾರು 48 ಟಿಎಂಸಿ ನೀರು ಸಂಗ್ರಹವಾಗಿದ್ದು ನಿನ್ನೆಯಿಂದ ನಾಲೆಗೆ ನೀರು ಹರಿಸಲಾಗುತ್ತಿದೆ. ಈ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಮೊದಲ ಬೆಳೆಗೆ ನಾಲೆಗೆ ನೀರು ಹರಿಸುವಂತೆ ನಾವೂ ಸಹ ಸರ್ಕಾರಕ್ಕೆ ಮನವಿ ಮಾಡಿದ್ದೆವು ಎಂದರು‌. ಇನ್ನೂ ಉತ್ತರ ಕರ್ನಾಟಕದಲ್ಲಿ ಆಗಿರುವ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಮರೋಪಾದಿಯಲ್ಲಿ ಪರಿಹಾರ ಕೆಲಸಗಳಾಗಬೇಕಿದೆ. ನೆರೆ ಸಂತ್ರಸ್ತರ ನೆರವಿಗಾಗಿ ತುರ್ತು ಕೆಲಸಗಳಾಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಪರಿಹಾರ ಕಾರ್ಯವನ್ನು ಯುದ್ಧೋಪಾದಿಯಲ್ಲಿ ಮಾಡಬೇಕು ಎಂದು ಆಗ್ರಹಿಸಿದರು.

ಬೈಟ್1:- ಕೆ. ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಶಾಸಕ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.