ಕೊಪ್ಪಳ: ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಈಗ ಮತ್ತೊಮ್ಮೆ ಬೆಂಗಳೂರು ಲಾಕ್ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಕಾರ್ಮಿಕರು ವಾಪಸಾಗುತ್ತಿದ್ದಾರೆ.
ಬೆಂಗಳೂರಿನಲ್ಲಿದ್ದ ಜಿಲ್ಲೆಯ ಅನೇಕ ಜನರು, ಕಾರ್ಮಿಕರು ತಮ್ಮ ಕುಟುಂಬ ಸಮೇತ ಇಂದು ಬೆಳಗ್ಗೆ ಬಸ್ಗಳಲ್ಲಿ ಜಿಲ್ಲೆಗೆ ಆಗಮಿಸಿದ್ದಾರೆ. ನಿನ್ನೆ ರಾತ್ರಿ ಬೆಂಗಳೂರಿನಿಂದ ಹೊರಟ ಜಿಲ್ಲೆಯ ಜನರು ಕೊಪ್ಪಳಕ್ಕೆ ಆಗಮಿಸುತ್ತಿದ್ದಾರೆ. ಕಾರ್ಮಿಕರು, ಬೆಂಗಳೂರಿನ ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳು ತಮ್ಮ ಕುಟುಂಬ ಹಾಗೂ ಗಂಟುಮೂಟೆ ಸಮೇತವಾಗಿ ಜಿಲ್ಲೆಗೆ ಬಂದಿಳಿಯುತ್ತಿದ್ದಾರೆ. ಕೆಲಸ ಅರಸಿಕೊಂಡು ಲಾಕ್ಡೌನ್ ಸಡಿಲಿಕೆ ಬಳಿಕ ಇತ್ತೀಚೆಗಷ್ಟೇ ಇವರು ಬೆಂಗಳೂರಿಗೆ ತೆರಳಿದ್ದರು.
ಬೆಂಗಳೂರಲ್ಲಿ ಮತ್ತೆ ಲಾಕ್ಡೌನ್ ಘೋಷಣೆಯಾಗಿದ್ದರಿಂದ ವಾಪಸಾಗಿದ್ದು, ತಮ್ಮ ತಮ್ಮ ಊರುಗಳತ್ತ ತೆರಳಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಈಗ ಬೆಂಗಳೂರಿನಿಂದ ಜನರು ಬರುತ್ತಿದ್ದಾರೆ ಎಂಬ ವಿಷಯ ಕೇಳಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.