ಕೊಪ್ಪಳ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಮೀರ್ಗೆ ಮುಂದಿನ ಸಿಎಂ ನಾನೇ ಎಂದು ಪ್ರಚಾರ ಮಾಡಲು ಹೇಳಿರಬಹುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನಕ್ಕಾಗಿ ಈಗಲೇ ಕಾಂಗ್ರೆಸ್ನಲ್ಲಿ ಪೈಪೋಟಿ ಶುರುವಾಗಿದೆ. ಅವರ ತಟ್ಟೆಯಲ್ಲೇ ಕತ್ತೆ ಬಿದ್ದಿದೆ. ಅವರು ಇನ್ನೇನು ಬಿಜೆಪಿ ಬಗ್ಗೆ ಮಾತಾಡ್ತಾರೆ ಎಂದು ಕುಟುಕಿದರು.
ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಹೇಳಿಕೆ ಕುರಿತಂತೆ, ನೀವು ಜಮೀರ್ ಅಹ್ಮದ್ ಅಥವಾ ಡಿಕೆಶಿ ಅವರನ್ನು ಕೇಳಿ. ನಾನು ಬಿಜೆಪಿಯಲ್ಲಿದ್ದೇನೆ. ನಾನು ಕಾಂಗ್ರೆಸ್ ನಾಯಕ ಅಲ್ಲ. ಕಾಂಗ್ರೆಸ್ ಒಳ ಹೊರಗಿನ ಬಗ್ಗೆ ನಾನೇನು ಮಾತನಾಡಲಿ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಸಿಎಂ ಆಗಬೇಕು ಎಂದರೆ ಆ ಪಕ್ಷಕ್ಕೆ ಮೊದಲು ಬಹುಮತ ಬರಬೇಕಲ್ಲಾ. ಚುನಾವಣೆಗೆ ಇನ್ನೂ 2 ವರ್ಷವಿದೆ. ಕೂಸು ಹುಟ್ಟುವ ಮೊದಲೇ ಕುಲಾಯಿ ಹೊಲಿಸುವುದು ಬೇಡ. ಸದ್ಯ ಈ ಪ್ರಶ್ನೆಯೇ ಬರುವುದಿಲ್ಲ. ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಈಗಲೇ ಅವರು ಹಗಲುಗನಸು ಕಾಣುವುದು ಬೇಡ ಎಂದು ಕಾಂಗ್ರೆಸ್ಗೆ ಸಚಿವ ಬಿ ಸಿ ಪಾಟೀಲ್ ಟಾಂಗ್ ನೀಡಿದ್ದಾರೆ.
ಓದಿ:ಮುಖ್ಯಮಂತ್ರಿ ಆದಿಯಾಗಿ ಇಡೀ ಸರ್ಕಾರವೇ ನಮ್ಮ ಮರ್ಜಿಯಲ್ಲಿದೆ : ಹೆಚ್ ವಿಶ್ವನಾಥ್ ಗುಟುರು