ಕೊಪ್ಪಳ: ನಗರದ ಶ್ರೀ ಗವಿಮಠದ ವೃದ್ಧಾಶ್ರಮದಲ್ಲಿ ಆರಂಭಿಸಲಾಗಿರುವ ಕೋವಿಡ್ ಕೇರ್ ಸೆಂಟರ್ಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಡಳಿತದ ಸಹಯೋಗದಲ್ಲಿ ಶ್ರೀ ಗವಿಮಠ ಆರಂಭಿಸಿರುವ 100 ಹಾಸಿಗೆಯ ಕೊವೀಡ್ ಕೇರ್ ಸೆಂಟರ್ಗೆ ಭೇಟಿ ನೀಡಿದ ಸಚಿವರು, ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದರು.
ಬಳಿಕ ಗವಿಮಠಕ್ಕೆ ತೆರಳಿ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳೊಂದಿಗೆ ಸಮಾಲೋಚನೆ ನಡೆಸಿದರು. ಜಿಲ್ಲಾಧಿಕಾರಿ ವಿಕಾಸ್ ಸುರಾಳ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಜಿಲ್ಲಾ ಪಂಚಾಯಿತಿ ಸಿಇಒ ರಘುನಂದನಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜು ಸಚಿವರಿಗೆ ಸಾಥ್ ನೀಡಿದರು.