ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ಗ್ರಾಮದ ಬಾಲಕ ಮಂಜುನಾಥ್ ರೇಣುಕಪ್ಪ ಬುರ್ಲಿ (11) ಕಾಣೆಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಾಲಕನನ್ನು ಕೊಲೆ ಮಾಡಿ ಹಳ್ಳದಲ್ಲಿ ಹೂತು ಹಾಕಿರುವ ಭಯಾನಕ ವಿಷಯ ಹೊರಬಿದ್ದಿದೆ.
ಕುಕನೂರು ಪೊಲೀಸ್ ಠಾಣೆಯಲ್ಲಿ ಜುಲೈ 19 ರಂದು ದಾಖಲಾಗಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಕನೂರು ಪೊಲೀಸರು ಆರೋಪಿ ಅಣ್ಣಪ್ಪ ನಡುವಲಮನಿ ಎಂಬಾತನನ್ನು ಬಂಧಿಸಿ ಸ್ಥಳ ಪರಿಶೀಲನೆಗೆ ಕರೆತಂದಿದ್ದಾರೆ.
ಬಾಲಕನನ್ನು ಕೊಲೆ ಮಾಡಿ ಹೂತು ಹಾಕಿರುವ ಸ್ಥಳವನ್ನು ಆರೋಪಿಯು ಪೊಲೀಸರಿಗೆ ತೋರಿಸಿದ್ದಾನೆ. ಕೊಪ್ಪಳ ತಾಲೂಕಿನ ಹಲಗೇರಿ ಬಳಿ ಇರುವ ಹಳ್ಳವೊಂದರಲ್ಲಿ ಬಾಲಕನನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆ. ಈ ಕುರಿತಂತೆ ಪೊಲೀಸರು ಆರೋಪಿಯನ್ನು ಸ್ಥಳದಲ್ಲಿ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕಿದ್ದಾರೆ.