ಕೊಪ್ಪಳ: ಎತ್ತಿನಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಇರಕಲ್ ಗಡಾ ಗ್ರಾಮದ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಾರುತೆಪ್ಪ ಭರಮಗೌಡರ (28) ಎಂದು ಗುರುತಿಸಲಾಗಿದೆ. ಈತ ಕೊಪ್ಪಳ ತಾಲೂಕಿನ ಚಾಮಲಾಪುರ ಗ್ರಾಮದ ನಿವಾಸಿಯಾಗಿದ್ದು ಕೊಪ್ಪಳದಿಂದ ಚಾಮಲಾಪುರ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.